ಇಚಿಲಂಪಾಡಿ: ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆ

ಇಚಿಲಂಪಾಡಿ: ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆ

ನೆಲ್ಯಾಡಿ ಸಮೀಪದ ಇಚಿಲಂಪಾಡಿ ಎಂಬಲ್ಲಿಯ ರೆನೀಶ್ (ವ.27) ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರ್ಚ್ 30ರ ಮಧ್ಯರಾತ್ರಿ ನಡೆದಿದೆ.

ಈತನ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯು ಕೂಡ ಕೆಲಸಕ್ಕೆ ಹೋಗಿರುತ್ತಾನೆ.

ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಬಾಲಕೃಷ್ಣ ಭೇಟಿ ನೀಡಿ ಮೃತ ದೇಹವನ್ನು ಉಪ್ಪಿನಂಗಡಿಯ ಶವಗಾರಕ್ಕೆ ಕಳಿಸಲಾಗಿದೆ.

Leave a Reply

You May Have Missed

error: Content is protected !!