ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 27ರಿಂದ 30ರವರೆಗೆ ನಡೆದ 42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ 45ರ ವಯೋಮಾನದ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ.

ಇವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಸಂಸ್ಕೃತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

You May Have Missed

error: Content is protected !!