ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ

ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಡಿಪಾರ್ಟ್‌ಮೆಂಟ್‌ನ ಲೆಕ್ಕ ಸಹಾಯಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿ.
ನೇಮಕ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಯ ಇಲಾಖೆ ಹೆಸರು : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ಹುದ್ದೆಯ ಹೆಸರು : ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ : 242 (ಉಳಿಕೆ ಮೂಲ ವೃಂದ)
ವೇತನ ಶ್ರೇಣಿ : ರೂ.27,650-52,650.
ನೇಮಕಾತಿ ವಿಧಾನ : ಗ್ರೂಪ್‌ ಸಿ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ.

ವಿದ್ಯಾರ್ಹತೆ
ಬಿಕಾಂ / ಬಿಬಿಎಂ / ಬಿಬಿಎ ಡಿಗ್ರಿಯನ್ನು ಕಡ್ಡಾಯ ಪಾಸ್ ಮಾಡಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ನಿಗಧಿತ ವಯಸ್ಸು

  • ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 23-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24-04-2023
ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಅರ್ಜಿ ಶುಲ್ಕ ಮಾಹಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್‌ ರೂ.35 ಪಾವತಿಸಬೇಕು.

ವೆಬ್‌ಸೈಟ್‌ ವಿಳಾಸ https://www.kpsc.kar.nic.in/index.html

Leave a Reply

You May Have Missed

error: Content is protected !!