ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜನ್ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಬಡ ರೋಗಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜನ್ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಬಡ ರೋಗಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು

ನೆಲ್ಯಾಡಿ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ನೆಲ್ಯಾಡಿ ಲೀಜನ್ ನ ವತಿಯಿಂದ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಬಡ ರೋಗಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲಾಯಿತು.

ನೆಲ್ಯಾಡಿಯ ಜನತಾ ಕಾಲೋನಿಯ ಪಕ್ಕದಲ್ಲಿರುವ ಬಡ ಕೂಲಿ ಕಾರ್ಮಿಕ ಶ್ರೀಧರನ್ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಯ ಅವಶ್ಯಕತೆ ಇರುವುದನ್ನು ಮನಗಂಡು ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನವರು ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಅವರ ಮನೆಗೆ ತೆರಳಿ ಆರ್ಥಿಕ ಸಹಾಯವನ್ನು ನೀಡಿದರು.

ಈ ಸಂದರ್ಭದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಅಧ್ಯಕ್ಷರಾದ ಸೀನಿಯರ್ ವೆಂಕಟ್ರಮಣ ಆರ್, ನಿಯೋಜಿತ ಅಧ್ಯಕ್ಷರಾದ ಸೀನಿಯರ್ ನಾರಾಯಣ ಎನ್ ಬಲ್ಯ, ಪೂರ್ವ ಅಧ್ಯಕ್ಷರಾದ ಸೀನಿಯರ್ ಡಾ.ಸದಾನಂದ ಕುಂದರ್, ಕೋಶಾಧಿಕಾರಿ ಸೀನಿಯರ್ ಪ್ರಶಾಂತ್ ಸಿ ಎಚ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!