ರಸ್ತೆ ಬದಿ ಕಂದಕಕ್ಕೆ ಬಿದ್ದ ಬೈಕ್: ಸಹಸವಾರ ಮೃತ್ಯು

ರಸ್ತೆ ಬದಿ ಕಂದಕಕ್ಕೆ ಬಿದ್ದ ಬೈಕ್: ಸಹಸವಾರ ಮೃತ್ಯು

ಬಂಟ್ವಾಳ: ರಸ್ತೆ ಬದಿಯ ಸುಮಾರು 10 ಅಡಿಯ ಕಂದಕಕ್ಕೆ ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ವೇಳೆ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಯಶೋಧರ ಮೃತಪಟ್ಟ ಯುವಕ. ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಎಂಬವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರಿಬ್ಬರೂ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ದೈವ ಕೋಲ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇಂದು ಸುಮಾರು 3:30ರ ಸುಮಾರಿಗೆ ಇವರು ಬೈಕಿನಲ್ಲಿ ಬರುತ್ತಿದ್ದ ವೇಳೆ ಬಿ.ಸಿ. ರೋಡ್ ಸಮೀಪದ ಕೆಎಸ್ಸಾರ್ಟಿಸಿ ಬಸ್ ಡಿಪೋ ದ ಬಳಿ ತಲಪಾಡಿಯಲ್ಲಿ ರಸ್ತೆ ಬದಿಯ ಸುಮಾರು ಹತ್ತು ಅಡಿ ಆಳಕ್ಕೆ ಬೈಕ್ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಸಹಸವಾರ ಯಶೋಧರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!