ದಾಖಲೆ ಇಲ್ಲದ ಹಣ ವಶಕ್ಕೆ ಪಡೆದುಕೊಂಡಿರುವ ಪೊಲೀಸರು

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದುಕೊಂಡಿರುವ ಪೊಲೀಸರು

ಕಲ್ಲುಗುಂಡಿ : ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯಿಂದ ವರದಿಯಾಗಿದೆ.

ಬ್ಯಾಂಕ್‌ವೊಂದು ತನ್ನ ಎಟಿಎಂಗೆ ಹಣ ತುಂಬಿಸಲು ಲಕ್ಷಾಂತರ ರೂ. ಹಣವನ್ನು ಸಾಗಿಸುತ್ತಿತ್ತು. ಇದನ್ನು ಕಲ್ಲುಗುಂಡಿಯ ಚೆಕ್‌ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆಹಿಡಿದಿದ್ದಾರೆ. ಹಣ ಸಾಗಿಸಲು ಅನುಮತಿ ಪಡೆದುಕೊಂಡಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಆದರೆ ಅಲ್ಲಿ ಸರಿಯಾದ ದಾಖಲೆಗಳು ಇಲ್ಲದಿರುವುದರಿಂದ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮೇಲಾಧಿಕಾರಿಗಳು ಬಂದು ಕೊನೆಗೆ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು ಸುಳ್ಯಕ್ಕೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!