ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಸರಕಾರಿ ಬಸ್;‌ ಸವಾರ ಸ್ಥಳದಲ್ಲಿಯೇ ಮೃತ್ಯು

ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಸರಕಾರಿ ಬಸ್;‌ ಸವಾರ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಕ್ರಿಬೆಟ್ಟು ಎಂಬಲ್ಲಿ ಶುಕ್ರವಾರ (ಎ.14) ನಡೆದಿದೆ.

ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಡೊಂಬಯ್ಯ ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚಾಲಕನ ಅಜಾಗಕರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಅಪಘಾತ ‌ನಡೆದ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ

Leave a Reply

You May Have Missed

error: Content is protected !!