ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಾತಿನ‌ ಚಕಮಕಿ: ಕಾರ್ಯಕರ್ತರ ಕಾರಿನ ಗಾಜು‌ ಪುಡಿ

ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಾತಿನ‌ ಚಕಮಕಿ: ಕಾರ್ಯಕರ್ತರ ಕಾರಿನ ಗಾಜು‌ ಪುಡಿ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಕಾರಿನ ಗಾಜು ಪುಡಿ ಮಾಡಿದ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ‌ ಚಕಮಕಿ ನಡೆದಿದೆ. ಉದ್ರಿಕ್ತ ಕಾರ್ಯಕರ್ತರು ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಹತೋಟಿಗೆ ತಂದರು.

Leave a Reply

You May Have Missed

error: Content is protected !!