ನೆಟ್ಟಣ: ಆಲ್ಟೋ ಕಾರು- ತೂಫನ್ ಅಪಘಾತ; ಮಗು ಸೇರಿದಂತೆ ನಾಲ್ವರು ಮೃತ್ಯು

ನೆಟ್ಟಣ: ಆಲ್ಟೋ ಕಾರು- ತೂಫನ್ ಅಪಘಾತ; ಮಗು ಸೇರಿದಂತೆ ನಾಲ್ವರು ಮೃತ್ಯು

ಸುಬ್ರಹ್ಮಣ್ಯ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ (ಎ.18) ಮಧ್ಯಾಹ್ನ ಸಂಭವಿಸಿದೆ.

ತೂಫಾನ್ ಮತ್ತು ಕಾರು ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಸುಬ್ರಹ್ಮಣ್ಯ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.

ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

Leave a Reply

You May Have Missed

error: Content is protected !!