ಸುಳ್ಯ: ಸ್ಪರ್ಧೆಯಿಂದ ಹಿಂದೆ ಸರಿದ ಕೆಪಿಸಿಸಿ ಸದಸ್ಯ ನಂದಕುಮಾರ್‌

ಸುಳ್ಯ: ಸ್ಪರ್ಧೆಯಿಂದ ಹಿಂದೆ ಸರಿದ ಕೆಪಿಸಿಸಿ ಸದಸ್ಯ ನಂದಕುಮಾರ್‌

ಸುಳ್ಯ: ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತೀರ್ಮಾನ ಮಾಡಿದ್ದ ಕೆಪಿಸಿಸಿ ಸದಸ್ಯ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹೆಚ್.ಎಂ.ನಂದಕುಮಾರ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಂದಕುಮಾರ್ ಬಣ ತಟಸ್ಥರಾಗಿರಲು ಇರಲು ನಿರ್ಧರಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡದಂತೆ ನಂದಕುಮಾರ್‌ ಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಮಾತಿಗೆ ಬೆಲೆ ಕೊಟ್ಟು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಂದಕುಮಾರ್ ಸ್ಪಷ್ಟಪಡಿಸಿದ್ದಾರೆ.

Leave a Reply

You May Have Missed

error: Content is protected !!