SSLC ಫಲಿತಾಂಶ ಮೇ ಎರಡನೇ ವಾರದಲ್ಲಿ




ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಮಾರ್ಚ್ 30ರಿಂದ ಎಪ್ರಿಲ್ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ಎರಡನೇ ವಾರದಲ್ಲಿ ಅವರೆಲ್ಲರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.














Leave a Reply