ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನವ ವಿವಾಹಿತ ಸಾವು

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನವ ವಿವಾಹಿತ ಸಾವು

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನವವಿವಾಯಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿ ಎಂಬವರ ಪುತ್ರಿ ಕೌಶಲ್ಯ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿಯೊಬ್ಬರ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

You May Have Missed

error: Content is protected !!