ರಾಮ ಸೇನಾ ಕರ್ನಾಟಕ(ರಿ): ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ಸ್ವಚ್ಛತಾ ಶ್ರಮದಾನ

ರಾಮ ಸೇನಾ ಕರ್ನಾಟಕ(ರಿ): ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ಸ್ವಚ್ಛತಾ ಶ್ರಮದಾನ

ಸುಬ್ರಹ್ಮಣ್ಯ: ರಾಮ ಸೇನಾ ಕರ್ನಾಟಕ (ರಿ).ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು,ಬಂಟ್ವಾಳ,ಬೆಳ್ತಂಗಡಿ ಘಟಕಗಳ ಮಹಿಳೆಯರೂ ಸೇರಿದಂತೆ ಸುಮಾರು 60 ಮಂದಿ ಸದಸ್ಯರು ದಿನಾಂಕ 23-04-2023 ರಂದು ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ದೇವಸ್ಥಾನದ ಆಸುಪಾಸಿನ ಪ್ರದೇಶದಲ್ಲಿ, ರಥಬೀದಿ, ದರ್ಪಣ ತೀರ್ಥ ಹಾಗೂ ಕುಮಾರಧಾರಾ ನದಿಯಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸುವ ಶ್ರಮದಾನ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿಯ ಸದಸ್ಯ ಹರೀಶ ಇಂಜಾಡಿಯವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಸಂಪುಟ ನರಸಿಂಹ ಸುಬ್ರಹ್ಮಣ್ಯ ಮಠದ ವತಿಯಿಂದ ಸಾಗಾಟ ವಾಹನ, ಗ್ಲವ್ಸ್, ಊಟ ಉಪಾಹಾರದ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿಗಳನ್ನು ನೀಡಿ ಸಹಕರಿಸಲಾಯಿತು.

ಹರೀಶ ಇಂಜಾಡಿಯವರು ತಂಡದ ಸದಸ್ಯರಿಗೆ ಸೂಕ್ತ ಸಲಹೆ, ನಿರ್ದೇಶನ ನೀಡಿ ಶುಭ ಹಾರೈಸಿದರು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಪುರುಷೋತ್ತಮ ಆಚಾರ್ ರವರು ಕಾರ್ಯಕ್ರಮ ಸಂಘಟಿಸಿದ್ದರು.

Leave a Reply

You May Have Missed

error: Content is protected !!