ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗರ್ಡಾಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60) ಅವರು ಎ.30ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಾಲಕರಾಗಿದ್ದ ಅವರು ಸುಮಾರು ಒಂದು ವರ್ಷದಿಂದ ಕೆಲಸ ಬಿಟ್ಟು ಮನೆ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.
ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅವರು ಹಣದ ಕೊರತೆಯಿಂದಾಗಿ ನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಎ.22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣ ಸೇವಿಸಿದ್ದರು.
ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು.
ಪುತ್ರ ಸಂದೀಪ್‌ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!