ಸಿಇಟಿ ಪ್ರವೇಶ ಪತ್ರ ಬಿಡುಗಡೆ..ಮೇ.20ಕ್ಕೆ ಪ್ರವೇಶ ಪರೀಕ್ಷೆ

ಸಿಇಟಿ ಪ್ರವೇಶ ಪತ್ರ ಬಿಡುಗಡೆ..ಮೇ.20ಕ್ಕೆ ಪ್ರವೇಶ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಸಿಇಟಿ 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ http://kea.kar.nic.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಕೆಇಎ, ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಿಇಟಿ-2023 ಪರೀಕ್ಷೆಯನ್ನು ನಿಗದಿತ ದಿನಾಂಕದಂದು ನಡೆಸಲಾಗುವುದು.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಅಥವಾ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ.

KCET 2023 ಪ್ರವೇಶ ಪತ್ರ ಡೌನ್‌ಲೋಡ್ ವಿಧಾನ
* ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.
* ಓಪನ್‌ ಆದ ಪೇಜ್‌ನಲ್ಲಿ KCET 2023 ಹಾಲ್ ಟಿಕೆಟ್ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮಗೆ ಮತ್ತೊಂದು ಪೇಜ್‌ ಓಪನ್‌ ಆಗುತ್ತದೆ.
*ಓಪನ್ ಆದ ಪೇಜ್‌ನಲ್ಲಿ ಅಭ್ಯರ್ಥಿಗಳು ನಿಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಟೈಪ್‌ ಮಾಡಿ ಲಾಗಿನ್ ಆಗಿ.
* ನಂತರ ನಿಮಗೆ ಪರದೆಯ ಮೇಲೆ ನಿಮ್ಮ ಹಾಲ್‌ ಟಿಕೆಟ್‌ ಕಾಣಸಿಗುಸುತ್ತದೆ.
* ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.
*ಪ್ರವೇಶ ಪತ್ರವನ್ನು ಡೌನ್‌ಲೊಡ್‌ ಮಾಡಿಕೊಂಡ ಮೇಲೆ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿರುವ ಮಾರ್ಗದರ್ಶನಗಳನ್ನು / ಕಾರ್ಯವಿಧಾನಗಳನ್ನು ತಪ್ಪದೆ ಅನುಸರಿಸಲು ಸೂಚಿಸಿದೆ.

ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

Leave a Reply

You May Have Missed

error: Content is protected !!