ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಧಾನಸಭೆ ಚುನಾವಣೆ ನಿಮಿತ್ತ ಮತದಾನ ಮಾಡಲು ಬಂದಿದ್ದ ಗರ್ಭಿಣಿಯೊಬ್ಬರು ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮನೀಡಿದ ಘಟನೆ ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228 ರಲ್ಲಿ ಈ ಘಟನೆ ನಡೆದಿದ್ದು, ಮಣಿಲಾ ಎನ್ನುವವರೇ ಮಗುವಿಗೆ ಜನ್ಮನೀಡಿದ ಮಹಿಳೆಯಾಗಿದ್ದಾಳೆ.

ಗರ್ಭಿಣಿ ಮಣಿಲಾ ಅವರು ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದಾರೆ. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪಕ್ಕದಲ್ಲೇ ಇದ್ದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೆರಿಗೆಯಾದ ಬಳಿಕ ಸಮೀಪದ ಪ್ರಾಥಮಿಕ ಆರೋಗ್ಯಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!