ದ.ಕ.ಜಿಲ್ಲಾದ್ಯಂತ ಗುಡುಗು ಸಹಿತ ಭಾರೀ ಮಳೆ

ದ.ಕ.ಜಿಲ್ಲಾದ್ಯಂತ ಗುಡುಗು ಸಹಿತ ಭಾರೀ ಮಳೆ

ದ.ಕ.ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ತಾಲೂಕಿನ ವಿವಿಧೆಡೆ ಗುರುವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ.

ವಾಯುಭಾರ ಕುಸಿತದಿಂದಾಗಿ ಮುಂಗಾರುಪೂರ್ವ ಮಳೆಯು ಬಿರುಸು ಪಡೆದಿದ್ದು, ಗುರುವಾರ ರಾತ್ರಿ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ.
ಎಡಬಿಡದೆ ಸುರಿದ ರಭಸದ ಮಳೆ ಮತ್ತು ಮಿಂಚು ಸಹಿತ ಸಿಡಿಲಿನ ಆರ್ಭಟಕ್ಕೆ ಸಾರ್ವಜನಿಕರು, ದ್ವಿಚಕ್ರ ವಾಹನಿಗರಲ್ಲದೆ ಸಾರ್ವಜನಿಕರು ಸಕಾಲಕ್ಕೆ ವಾಸಸ್ಥಾನಕ್ಕೆ ತಲುಪಲಾಗದೆ ಪರದಾಡುವಂತಾಗಿದೆ.
ನಾನಾ ಕಡೆ ಬಿರುಸಿನ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದ ಜನತೆ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Leave a Reply

You May Have Missed

error: Content is protected !!