ಪುತ್ತೂರು: ಇಬ್ಬರೂ ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾಕಿದ ಪ್ರಕರಣ; ಇಬ್ಬರ ಬಂಧನ

ಪುತ್ತೂರು: ಇಬ್ಬರೂ ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾಕಿದ ಪ್ರಕರಣ; ಇಬ್ಬರ ಬಂಧನ

ಪುತ್ತೂರು: ನಗರದ ಬಸ್ಸು ನಿಲ್ದಾಣದ ಬಳಿ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ಬಗ್ಗೆ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ನಗರಸಭೆಯ ಮುಖ್ಯಾಧಿಕಾರಿ ಮಧು ಎಸ್ ಮನೋಹರ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ನಗರಸಭಾ ವ್ಯಾಪ್ತಿಯ ಬಸ್ಸು ನಿಲ್ದಾಣದ ಮುಂಭಾಗದಲ್ಲಿರುವ ಅರಣ್ಯ ಇಲಾಖೆಯ ಆವರಣದ ಬಳಿ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ಹೆಸರಿನಲ್ಲಿ ಅವಹೇಳನಕಾರಿ ಬರಹ ಮತ್ತು ಸರಕಾರಿ ಆಸ್ತಿ ಪಾಸ್ತಿ ಮತ್ತು ಸಾರ್ವಜನಿಕ ಸ್ಥಳ ವಿರೂಪಗೊಳಿಸಿರುವ ಬಗ್ಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!