ಕಾರು ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ

ಕಾರು ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ

ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ ಘಟನೆ ಮೇ 18ರ ಬೆಳಗ್ಗೆ ನಡೆದಿದೆ.

ಬೈಕ್ ಸವಾರ ಅಶೋಕ್ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಪೆರಣದ ಮನೆಗೆ ಹೋಗುತ್ತಿದ್ದರು. ಈ ಸಂದರ್ಭ ಉಪ್ಪಿನಂಗಡಿಯಿಂದ ಉಪ್ಪಾರಪಳಿಕೆಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿ ಮೂಲದ ಉದ್ಯಮಿಯೊಬ್ಬರ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಬಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

You May Have Missed

error: Content is protected !!