ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಟಿಪ್ಪರ್ ಲಾರಿಗಳು ವಶ; ಗಣಿ ಇಲಾಖೆಯ ಕಾರ್ಯಾಚರಣೆ

ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಟಿಪ್ಪರ್ ಲಾರಿಗಳು ವಶ; ಗಣಿ ಇಲಾಖೆಯ ಕಾರ್ಯಾಚರಣೆ

ಕುಂದಾಪುರ: ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ‌.

ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಮೇ. 19 ರ ರಾತ್ರಿ 10 ಗಂಟೆಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.ಹಾಗೂ ರಾತ್ರಿ 1 ಗಂಟೆಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 4 ಲಾರಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಹಾಗೂ 1 ಲಾರಿಯನ್ನು ಕುಂದಾಪುರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

Leave a Reply

You May Have Missed

error: Content is protected !!