ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ನೇಮಕ

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ನೇಮಕ

ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಲಾಗಿದೆ.
ಬಿಹಾರ ಮೂಲದ ಅಲೋಕ್ ಮೋಹನ್ 1987ನೇ ಬ್ಯಾಚ್ ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ.

Leave a Reply

You May Have Missed

error: Content is protected !!