CET Results: ಜೂ. 15ರಂದು CET ಫಲಿತಾಂಶ



ಬೆಂಗಳೂರು: ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ ಸಿಇಟಿಯ ಫಲಿತಾಂಶವು ಜೂನ್ 15ರಂದು ಪ್ರಕಟವಾಗಲಿದೆ.

ಸಿಇಟಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ್‍ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.
ಪ್ರಾಧಿಕಾರವು ಫಲಿತಾಂಶವನ್ನು ಜೂ. 12 ಅಥವಾ 14ರಂದು ಪ್ರಕಟಿಸಲು ಈ ಮೊದಲು ನಿರ್ಧರಿಸಿತ್ತು. ಆದರೆ ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂ. 15ರಂದು ಪ್ರಕಟಿಸಲು ನಿರ್ಧರಿಸಿದೆ.
















Leave a Reply