ನಿಯಂತ್ರಣ ತಪ್ಪಿ ಬಿದ್ದು ಸ್ಕೂಟರ್‌ ಸವಾರ ಸಾವು

ನಿಯಂತ್ರಣ ತಪ್ಪಿ ಬಿದ್ದು ಸ್ಕೂಟರ್‌ ಸವಾರ ಸಾವು

ಮಂಗಳೂರು: ನಿಯಂತ್ರಣ ತಪ್ಪಿ ಬಿದ್ದು ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಗರದ ಕೆ.ಎಸ್‌. ರಾವ್‌ ರಸ್ತೆಯ ಬಳಿ ಸಂಭವಿಸಿದೆ.

ವಾಸುದೇವ ಶೆಣೈ (57) ಮೃತಪಟ್ಟವರು. ಅವರು ಜೂ. 8ರಂದು ರೆಸಿಡೆನ್ಸಿ ಕಟ್ಟಡವೊಂದರ ಪಾರ್ಕಿಂಗ್‌ ಸ್ಥಳದ ಒಳಗೆ ಸ್ಕೂಟರ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!