ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಅವರ ಪತ್ನಿ ಹೃದಯಾಘಾತದಿಂದ ನಿಧನ

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಅವರ ಪತ್ನಿ ಹೃದಯಾಘಾತದಿಂದ ನಿಧನ

ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣ ಹೆಗ್ಡೆ(49.ವ) ಜು.3 ರಂದು ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ

ಮೂಲತಃ ಹೊನ್ನಾವರದವರಾದ ಅವರು ಪ್ರಸ್ತುತ ಉಜಿರೆ ಉಂಡ್ಯಾಪು ನಗರದಲ್ಲಿ ನೆಲೆಸಿದ್ದರು.
ಮಧ್ಯಾಹ್ನ 12.40 ರ ಸುಮಾರಿಗೆ ಸುವರ್ಣಾ ಹೆಗ್ಡೆ ಮನೆಯಲ್ಲಿ ಕುಸಿದು ಬಿದ್ದಿರುವುದನ್ನು ಪುತ್ರ ನೋಡಿ ಬಳಿಕ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಅದಾಗಲೆ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರು.

ಮೃತರು ಪತಿ ಭಾಸ್ಕರ್ ಹೆಗ್ಡೆ, ಮಗ ಶಶಾಂಕ್ ಹೆಗ್ಡೆ, ತಂದೆ, ತಾಯಿ, ಓರ್ವ ಸಹೋದರ, ಓರ್ವ ಸಹೋದರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!