ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ತುಂಬೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ನಿವಾಸಿ ನವಾಝ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದ್ದು ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!