ಪರೀಕ್ಷೆಯಲ್ಲಿ ನಕಲು: ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ನಕಲು: ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಗಿರಿನಗರ ನಿವಾಸಿ ಆದಿತ್ಯ ಪ್ರಭು(19) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರು ಮೂಲದ ಇವರು ಪೋಷಕರ ಜತೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಬ್ರಿಗೇಡ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದು, ಹೊಸಕೆರೆ ಹಳ್ಳಿ ಸಮೀಪದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಟೆಕ್‌ನ ದ್ವಿತೀಯ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದ.
ಸೋಮವಾರ ಪರೀಕ್ಷೆಯಿದ್ದು, ಈ ವೇಳೆ ಮೊಬೈಲ್‌ ಮೂಲಕ ನಕಲು ಮಾಡುತ್ತಿದ್ದ. ಅದನ್ನು ಗಮನಿಸಿದ ಶಿಕ್ಷಕರು, ಆತನನ್ನು ಕೊಠಡಿಯಿಂದ ಹೊರಗೆ ಕರೆತಂದು ಕಾಲೇಜು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಆಡಳಿತ ಮಂಡಳಿ ಕೂಡಲೇ ಆತನ ಪೋಷಕರಿಗೆ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅದರಿಂದ ಬೇಸರಗೊಂಡು 9ನೇ ಮಹಡಿಗೆ ಹೋಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!