ಖಾಸಗಿ‌ ಬಸ್- ಬೈಕ್ ಡಿಕ್ಕಿ; ಯುವಕ ಮೃತ್ಯು

ಖಾಸಗಿ‌ ಬಸ್- ಬೈಕ್ ಡಿಕ್ಕಿ; ಯುವಕ ಮೃತ್ಯು

ಬಂಟ್ವಾಳ: ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ (28) ಮೃತಪಟ್ಟ ಯುವಕ.
ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ರವಿವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು. ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

Previous post

ಇಚ್ಲಂಪಾಡಿ ಕೆರ್ನಡ್ಕ ರಸ್ತೆ ಸಮಸ್ಯೆ ಇತ್ಯರ್ಥ:ಮಾನವೀಯ ನೆಲೆಯಲ್ಲಿ ಖಾಸಗಿ ಜಾಗದವರು ರಿಕ್ಷಾ ಸಂಚರಿಸುವಷ್ಟು ರಸ್ತೆಗೆ ಜಾಗ ಬಿಡಲು ಒಪ್ಪಿಗೆ

Next post

ಸೌಜನ್ಯ ಪ್ರಕರಣ: ನೈಜ ಆರೋಪಿಯ ಪತ್ತೆಗಾಗಿ ಧರ್ಮಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

Leave a Reply

You May Have Missed

error: Content is protected !!