ಪುತ್ತೂರು ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಕ್ನಾನಾಯ ಜ್ಯೋತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಕ್ನಾನಾಯ ಜ್ಯೋತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮುಡ್ನೂರಿನಲ್ಲಿ ಜರಗಿತು.

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಪ್ರಾಥಮಿಕ ಶಾಲಾ ಹುಡುಗಿಯರ ವಿಭಾಗದಲ್ಲಿ ಆರನೇ ತರಗತಿಯ ಅಲ್ವಿಷಾ ಪಿ.ಪಿ. ಚತುರ್ಥ ಹಾಗೂ ಹುಡುಗರ ವಿಭಾಗದಲ್ಲಿ ಏಳನೆಯ ತರಗತಿಯ ಅದ್ವೈತ್ ಎಸ್.ಪಿ.ಪ್ರಥಮ ಸ್ಥಾನ ಗಳಿಸಿದ್ದಾರೆ.

ಪ್ರೌಢಶಾಲಾ ಹುಡುಗಿಯರ ವಿಭಾಗದಲ್ಲಿ ಹತ್ತನೆಯ ತರಗತಿ ಯ ಆರ್ಯ ಎಸ್.ಪಿ. ಚತುರ್ಥ ಸ್ಥಾನಗಳಿಸಿದ್ದಾರೆ. ಇವರೆಲ್ಲರೂ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Leave a Reply

You May Have Missed

error: Content is protected !!