ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ; ಹಿಂದೂ ಪರ ಸಂಘಟನೆಗಳಿಂದ ಬೃಹತ್ ಜಾಥ

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ; ಹಿಂದೂ ಪರ ಸಂಘಟನೆಗಳಿಂದ ಬೃಹತ್ ಜಾಥ

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ಸಮಗ್ರ ತನಿಖೆಗೆ ಒತ್ತಾಯಿಸಿದರು.

ವಿಶ್ವಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಸಂಘಪರಿವಾರದ ಸಂಘಟನೆಗಳನ್ನು ಒಳಗೊಂಡ ಬೃಹತ್ ಪ್ರತಿಭಟನೆ ಜಾಥ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾಗಿ ಶ್ರೀ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಸಂಪನ್ನಗೊಂಡಿತು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಮಂದಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು, ಸಾವಿರಾರು ಮಹಿಳೆಯರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಶಾಸಕರಾದ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಯಶ್ ಪಾಲ್ ಸುವರ್ಣ, ಕಿರಣ್ ಕೊಡ್ಗಿ ಭಾಗಿಯಾದರು.
ಘಟನೆಯ ಕುರಿತು ಟ್ವೀಟ್ ಮಾಡಿ ಗಮನ ಸೆಳೆದಿದ್ದ ರಶ್ಮಿ ಸಾಮಂತ್ ಭಾಗಿಯಾಗಿ ಮಾತನಾಡಿ, ಶೀಘ್ರ ತನಿಖೆಗೆ ಒತ್ತಾಯಿಸಿದರು.

Leave a Reply

You May Have Missed

error: Content is protected !!