ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು ದಿನಾಂಕ 03-08-2023ರಂದು ನಡೆಯಿತು.

ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 10ನೇ ತರಗತಿಯ ಸುಶ್ಮಿತಾ ಟಿ.ರಾವ್(ಶ್ರೀ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

You May Have Missed

error: Content is protected !!