ಮಾನಹಾನಿಗೆ ಯತ್ನ, ಮಗನಿಗೆ ಹಲ್ಲೆ ; ಸೌಜನ್ಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಾನಹಾನಿಗೆ ಯತ್ನ, ಮಗನಿಗೆ ಹಲ್ಲೆ ; ಸೌಜನ್ಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ:ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪ ಗೌಡ ಎಂಬವರ ಪತ್ನಿ ಕುಸುಮಾವತಿ(48) ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಮಗಳು ಸೌಜನ್ಯ ಸುಮಾರು 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿ ಇದರ ನೈಜ ಆರೋಪಿಗಳನ್ನು ಅತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ.4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೆ. ಈ ಸಂದರ್ಭ ವ್ಯಕ್ತಿಯೊಬ್ಬನು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮೈಗೆ ಕೈಹಾಕಿ ತಾನು ಧರಿಸಿದ್ದ ಚೂಡಿದಾರದ ವೇಲನ್ನು ಹಿಡಿದೆಳೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Previous post

ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ – ಸೂರತ್‌ ನ್ಯಾಯಾಲಯ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ

Next post

ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

Leave a Reply

You May Have Missed

error: Content is protected !!