ಪಬ್‌ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಪಬ್‌ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಪಬ್‌ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಪ್ರವೀಣ್ ಪಾಟೀಲ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಈತ ಕಲಬುರಗಿ ನಗರದ ಖಾಸಗಿ ಕಾಲೇಜ್‌ನಲ್ಲಿ ಬಿಇ (BE) ವ್ಯಾಸಂಗ ಮಾಡುತ್ತಿದ್ದು, ಬಿಇ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್ ಕೋರ್ಸ್ ಮಾಡಿದ್ದ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಪ್ರವೀಣ್ ಪಬ್‌ಜಿ ಗೇಮ್‌ನಿಂದ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಪಬ್‌ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಆರ್‌ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!