ಹರಿಶ್ಚಂದ್ರ ಘಾಟ್‌ನಲ್ಲಿ ಸಂಜೆ 4 ಗಂಟೆಗೆ ಸ್ಪಂದನಾ ಅಂತ್ಯಸಂಸ್ಕಾರ

ಹರಿಶ್ಚಂದ್ರ ಘಾಟ್‌ನಲ್ಲಿ ಸಂಜೆ 4 ಗಂಟೆಗೆ ಸ್ಪಂದನಾ ಅಂತ್ಯಸಂಸ್ಕಾರ

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಇಂದು ಸಂಜೆ (ಆಗಸ್ಟ್‌ 9) 4 ಗಂಟೆಗೆ ಸ್ಪಂದನಾ ಕಡೆಯ ಹಂತದ ವಿಧಿ ವಿಧಾನ ಪದ್ಧತಿ ನಡೆಯಲಿದೆ. ಈಡಿಗ ಪದ್ಧತಿಯಂತೆ ಅಂತ್ಯಸಂಸ್ಕಾರ ನಡೆಯಲಿದೆ.

ಸ್ಪಂದನಾ ತಂದೆ ಬಿ.ಕೆ ಶಿವರಾಂ ಅವರ ಮನೆಯಲ್ಲಿ ಸ್ಪಂದನಾ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದರು. ಕನ್ನಡದ ಚಿತ್ರರಂಗದ ಹಲವು ಸೆಲೆಬ್ರಿಟಿಗಳು, ಆಪ್ತರು, ರಾಜಕೀಯ ಗಣ್ಯರು, ಅಭಿಮಾನಿಗಳು ಬಂದು ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ್ದರು. ಇದೀಗ ಮಧ್ಯಾಹ್ನ 3 ಗಂಟೆಗೆ ಅಂತಿಮ ಯಾತ್ರೆ ಶುರುವಾಗಲಿದೆ. ಬಳಿಕ ಸಂಜೆ 4ಕ್ಕೆ ಅಂತ್ಯಸಂಸ್ಕಾರ ಮಾಡಲಾಗುತ್ತದೆ.

Leave a Reply

You May Have Missed

error: Content is protected !!