ವೇಣೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ 125 ಕೆ.ಜಿ. ರಕ್ತಚಂದನ ವಶ

ವೇಣೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ 125 ಕೆ.ಜಿ. ರಕ್ತಚಂದನ ವಶ

ಬೆಳ್ತಂಗಡಿ: ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯ ಅರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದಿದೆ.
ಆರೋಪಿತರಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ.
ಇವರು ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ನಡೆಸಿದ್ದರು‌. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯ ಅರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆ‌ಪಡೆದಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Previous post

ಶ್ರೀ ಧ.ಮಂ.ಪ.ಪೂ ಕಾಲೇಜು: ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Next post

ನೆಲ್ಯಾಡಿ ಕೌಕ್ರಾಡಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಕುಮಾರ್ ಬಾಕಿಜಾಲು, ಕಾರ್ಯದರ್ಶಿ ಮೋಹನ್ ಕಟ್ಟೆಮಜಲು

Leave a Reply

You May Have Missed

error: Content is protected !!