ಕಡಬ:ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಡಬ:ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಡಬ: ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಜರಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕಡಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಜಿ.ವಿ. ಅವರು ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಅವರು ಶುಭಾಶಂಸನೆ ಮಾಡಿದರು. ಶಾಲಾ ಸಂಚಾಲಕರಾದ ರೆ|ಫಾ|ಅನಿಶ್ ಫಿಲಿಪ್, ಮುಖ್ಯ ಶಿಕ್ಷಕಿ ಸಿ|ಮರಿಯ ಲೂಯಿಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಸಹ ಶಿಕ್ಷಕ ಮಿಥುನ್ ಕುಮಾರ್ ಸ್ವಾಗತಿಸಿ, ಸಹಶಿಕ್ಷಕಿ ಸಂಗೀತ ವಂದಿಸಿದರು. ವಿದ್ಯಾರ್ಥಿ ಗಳಾದ ರಕ್ಷಾ ಜೆ ರೈ, ಪ್ರಜ್ವಲ್ ರೈ ಮತ್ತು ಯಾನ್ವಿತಾ ಎಂ ಕೆ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!