ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಡುಬೆಟ್ಟು ದ.ಕ‌.ಜಿ‌.ಪಂ.ಹಿ.ಪ್ರಾ. ಶಾಲೆ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳಿಂದ ಪಥ ಸಂಚಲನ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ರವಿಪ್ರಸಾದ್ ಶೆಟ್ಟಿ ಹಾಗೂ ಸಲಾಂ ಬಿಲಾಲ್, ಮುಖ್ಯ ಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಶ್ರೀಮತಿ ಮಮತಾ ಸಿ.ಹೆಚ್. ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಲೀಲಾವತಿ ಎಂ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಸಜಿನ ಕೆ.ಎ. ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಕವಿತಾ ಡಿ ಕಾರ್ಯಕ್ರಮ ನಿರೂಪಿಸಿದರು.
ಗ್ರಾಮ ಪಂಚಾಯತ್ ಸದಸ್ಯರಾದಪ್ರಕಾಶ್ ಪೂಜಾರಿ, ಶ್ರೀಮತಿ ಪುಷ್ಪಾ, ಶ್ರೀಮತಿ ಜಯಲಕ್ಷ್ಮಿ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವಿಚಂದ್ರ ಪಡುಬೆಟ್ಟು, ಸಹ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ ಕೆ, ಅತಿಥಿ ಶಿಕ್ಷಕಿ ಶ್ರೀಮತಿ ತೀರ್ಥ ಪಿ.ವಿ. ಹಾಗೂ ಗೌರವ ಶಿಕ್ಷಕಿ ಶ್ರೀಮತಿ ನ್ಯಾನ್ಸಿ ಲಿಝಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Leave a Reply

You May Have Missed

error: Content is protected !!