ಪಡುಬೆಟ್ಟು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪಡುಬೆಟ್ಟು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪಡುಬೆಟ್ಟು: ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರೆ ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಮುಖ್ಯ ಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ ಹಾಗೂ ಸಹಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬುನಾದಿ ಹಂತದಲ್ಲಿ ತರಬೇತಿ ನೀಡುತ್ತಿರುವ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಲೀಲಾವತಿ ಎಂ ಇವರು ತರಬೇತಿ ನೀಡಿರುತ್ತಾರೆ.

Leave a Reply

You May Have Missed

error: Content is protected !!