ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ

ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ಪುಂಡ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಪ್ರಕರಣ ನಾಗಮಂಗಲದಲ್ಲಿ ನಡೆದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಲಾಂಗ್ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿದ್ಯಾರ್ಥಿಯಿಂದ ಬೈಕ್ ಹಾಗೂ ಲಾಂಗ್‍ನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳಿಸಿದ್ದಾರೆ.


















Leave a Reply