ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ; ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಸಭಾ ಕಾರ್ಯಕ್ರಮ

ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ; ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಸಭಾ ಕಾರ್ಯಕ್ರಮ

ನೆಲ್ಯಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಸಭಾ ಕಾರ್ಯಕ್ರಮ ಶುಕ್ರವಾರದಂದು ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿ ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶುಮಂದಿರ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ, ಇವರ ಸಂಯುಕ್ತ ಆಶ್ರಯದಲ್ಲಿ ಪದ್ಮನಾಭ ನೂಜಿನ್ಹಯ ಇವರ ಪುರೋಹಿತ್ಯ ದಲ್ಲಿ 14 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಶ್ರೀಮತಿ ಪವಿತ್ರಾ ವಿಜಯ ಕೆ ಸದಸ್ಯರು ಆಡಳಿತ ಸಮಿತಿ ವಿದ್ಯಾ ಸರಸ್ವತಿ ಶಿಶುಮಂದಿರ ಪುತ್ತೂರು ಇವರು ರಾಮನ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ಜಾತಿ ಭೇದಗಳಿಲ್ಲದೆ ರಕ್ಷೆಯಲ್ಲಿರುವ ನೂಲಿನಂತೆ ಒಗಟ್ಟಿನಿಂದ ಜೀವಿಸಬೇಕೆಂದು ಕರೆ ನೀಡಿದರು.

ಮುಖ್ಯ ಅಥಿತಿಗಳಾಗಿ ಆಗಮಿಸಿದ ಶ್ರೀಮತಿ ಕೆ ಎಸ್ ಮೀನಾಕ್ಷಿ ನೆಲ್ಯಾಡಿ ನಿವೃತ್ತ ಪ್ರಾಂಶುಪಾಲರು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರು ಭಕ್ತರಿಗೆ ಶುಭ ಹಾರೈಸಿದರು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಪ್ರತಿಮಾ ಅದ್ಯಕ್ಷರು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಇವರು ಉಪಸ್ಥರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಪ್ರೀತಾ ರವಿಚಂದ್ರ ಹೊಸವಕ್ಲು ಸ್ವಾಗತಿಸಿ, ಶ್ರೀಮತಿ ಪ್ರತಿಮಾ ಧನ್ಯವಾದವಿತ್ತರು, ಶ್ರೀಮತಿ ಭಾಗೀರಥಿ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!