ಗಂಡಿಬಾಗಿಲು ಸಿಯೋನ್ ಆಶ್ರಮ; ಓಣಂ ಹಬ್ಬ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ; ಓಣಂ ಹಬ್ಬ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಆಗಸ್ಟ್ 29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಗಂಡಿಬಾಗಿಲು ಚರ್ಚ್ ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಂಡಿ ಅವರು ಆಶೀರ್ವದಿಸಿದರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಮೇಲ್ವಿಚಾರಕರು, ಸೇವಾನಿರತರು, ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮಸ್ಥರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಸಂಸ್ಥೆಯ ಟ್ರಸ್ಟಿಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಆಶ್ರಮದ ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಮತ್ತು ಆಟೋಟ ಸ್ಪರ್ಧೆಗಳನ್ನು ಏರ್ಪಾಡಿಸಲಾಗಿತ್ತು. ಸಾಂತ್ವನಂ ಕುವೈಟ್ ಅವರಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಯಿತು.

Leave a Reply

You May Have Missed

error: Content is protected !!