ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾದ ಕಾರು; ಮೂವರು ದುರ್ಮರಣ

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾದ ಕಾರು; ಮೂವರು ದುರ್ಮರಣ

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಇಲ್ಲಿನ ಸಮೀಪದ ಅಡ್ಕಾರು ಎಂಬಲ್ಲಿ ಆ.31ರ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿತ್ತು. ನಾಲ್ವರ ಪೈಕಿ ಗಂಬೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಗಾಯಗೊಂಡು ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ‌.

Leave a Reply

You May Have Missed

error: Content is protected !!