ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ

ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಸುಳ್ಯದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ ನಾರಾಯಣ ರಸಪ್ರಶ್ನೆ ಸ್ಪರ್ಧೆ ನಡೆಸಿ ಆರೋಗ್ಯ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಹಾಗೂ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮದ ನೇತ್ರತ್ವ ವಹಿಸಿದ್ದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಹಾಸ್ ಯು.ಪಿ ಪ್ರಥಮ, ಅಕ್ಷತಾ ಕೆ ದ್ವಿತೀಯ ಹಾಗೂ ಅಂಕುಶ್ ಕೆ.ಪಿ ತ್ರತೀಯ ಬಹುಮಾನ ಗಳಿಸಿದರು.

Leave a Reply

You May Have Missed

error: Content is protected !!