ಕಾರು & ಬೈಕ್‌ ಅಪಘಾತ: ಸವಾರ ಸಾವು

ಕಾರು & ಬೈಕ್‌ ಅಪಘಾತ: ಸವಾರ ಸಾವು

ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

ತತ್‌ಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.ಬೈಕ್‌ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!