ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು.
ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಹಾಗೂ ಕಟ್ಟಡ ಸಮಿತಿಯ ಗೌರವಾಧ್ಯಕ್ಷರಾದ ಕೆ.ವಿ ಭಟ್ ಹಳ್ಳಿಂಗೇರಿ ಇವರು ಶಿಲಾನ್ಯಾಸ ನೆರವೇರಿಸಿದರು.

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ಹೆಚ್.ಕೆ, ಕಾರ್ಯದರ್ಶಿಯವರಾದ ಶ್ರೀಮತಿ ಸಂಧ್ಯಾ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಕಟ್ಟಡ ಸಮಿತಿಯ ಅಧ್ಯಕ್ಷರಾದ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾದ ಜಯಂತ ಅಡೀಲು, ಕಾರ್ಯದರ್ಶಿ ಹರಿಪ್ರಸಾದ್.ಕೆ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಊರ ಗಣ್ಯರು ಉಪಸ್ಥಿತರಿದ್ದರು. ಕಟ್ಟಡ ಕಾಮಗಾರಿಯ ಬಿಲ್ಡ್-ಟೆಕ್ ಸಂಸ್ಥೆಯ ಇಂಜಿನಿಯರ್ ಪ್ರಶಾಂತ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!