ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟಕೋಶ, ಯೂತ್ ರೆಡ್ ಕ್ರಾಸ್ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆಯು ನಡೆಯಿತು.

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ವಿದ್ಯಾಲಯದ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ ಶೃತಿ ಇವರು ಉದ್ಘಾಟಕರಾಗಿ ಆಗಮಿಸಿದ್ದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ದಿನೇಶ್ ಕೆ. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮಹಾವಿದ್ಯಾಲಯದ ಯೂಥ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸೃಜನ್ ಮುಂಡೂಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವಾತಿ ಜಿ ಆರ್ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಹರ್ಷಿತಾ ಅತಿಥಿಗಳನ್ನು ಪರಿಚಯಿಸಿದರು. ರಚನಾ ಸಿ ಪ್ರಾರ್ಥಿಸಿ, ಸಂಪೂರ್ಣ ಎ.ಜಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶ್ರೀಮತಿ ವನಿತಾ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!