ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿನಿ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ತೃತೀಯ

ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿನಿ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ತೃತೀಯ

ಕರ್ನಾಟಕ ರಾಜ್ಯ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2023 ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ ನಡೆಯಿತು.

ಸ್ಪರ್ಧೆಯಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾದ ಲಕ್ಷ್ಯ ಡಿ ಎ (ದಿನೇಶ್ ಕುಮಾರ್ ಹಾಗೂ ರೇಖಾ ಡಿ ದಂಪತಿ ಪುತ್ರಿ) ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

You May Have Missed

error: Content is protected !!