ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ನಗರದ ಬಿಜೈ ಚರ್ಚ್‌ ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ಶನಿವಾರ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದಳು. ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮೃತಳು ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ.

ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!