ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ.ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Leave a Reply

You May Have Missed

error: Content is protected !!