48 ಟನ್‌ ಅಕ್ರಮ ಮರಳು ವಶ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

48 ಟನ್‌ ಅಕ್ರಮ ಮರಳು ವಶ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಲಾಗಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂದಾರು ಗ್ರಾ.ಪಂ. ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದು ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ 48 ಟನ್‌ನಷ್ಟು ಮರಳನ್ನು ಮುಟ್ಟುಗೋಲು ಹಾಕಿದ್ದಾರೆ.

ದಾಳಿ ನಡೆಸಿದ ಗಣಿ ಇಲಾಖೆ ಹಾಗೂ ಪೊಲೀಸರು ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್‌ ಎಂಬವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Leave a Reply

You May Have Missed

error: Content is protected !!