ಕಾರು-ರಿಕ್ಷಾ ಢಿಕ್ಕಿ; ಓರ್ವ ಮೃತ್ಯು

ಕಾರು-ರಿಕ್ಷಾ ಢಿಕ್ಕಿ; ಓರ್ವ ಮೃತ್ಯು

ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಮೃತ ರಿಕ್ಷಾ ಚಾಲಕನನ್ನು ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನರ್ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!